Index   ವಚನ - 154    Search  
 
ಪ್ರಣಮವೆ ಪ್ರಾಯ, ಪ್ರಾಣವೆ ಲಿಂಗ. ಲಿಂಗವೆ ಅಂಗ, ಆ ಅಂಗವೆ ಆಗಮ್ಯ ಅಗೋಚರ ಅಪ್ರಮಾಣ. ಲಿಂಗಸಂಗವೆ ಜಂಗಮಲಿಂಗ. ಜಂಗಮ ಒಂದೆರಡೆಂದು ಸಂದು ಮಾಡಲಂಜಿ ಬೆರಗಾಗಿರಲು, ಬೇಗಯೆದ್ದು ಬೆಳಗಾಯಿತ್ತ ಕಂಡು, ಕಣ್ಣು ಮುಚ್ಚಿ ಕರಗಿ ಪ್ರಾಣಲಿಂಗ ಲೀಯವಾದ, ಬಸವಪ್ರಿಯ ಕೂಡಸಂಗಮದೇವ ಪ್ರಭುವೆ.