Index   ವಚನ - 165    Search  
 
ಬ್ರಹ್ಮಾಂಡದ ಬಯಲ ಪಸರಿಸಿ, ಹಿಡಿವರೆ ಬಯಲಾವುದುಂಟು ಹೇಳಿರಣ್ಣಾ? ಕಂಗಳ ಮುಂದಣ ಕತ್ತಲೆ ಹರಿವುದಕ್ಕೆ ಜ್ಯೋತಿ ಆವುದುಂಟು ಹೇಳಿರಣ್ಣಾ ? ಇಂಗಿತವನರಿದ ಬಳಿಕ, ತ್ರಿವಿಧಕ್ಕೆ ತ್ರಿವಿಧವನಿತ್ತು ತ್ರಿವಿಧವನರಿದು, ತ್ರಿವಿಧವ ಮರೆದು, ಕಲಿಯುಗದ ಕತ್ತಲೆಯ ದಾಂಟಿ, ತನ್ನ ಭವವ ದಾಂಟಿದವಂಗೆ, ಬ್ರಹ್ಮಾಂಡದ ಬಯಲು ಕೈವಶವಾಯಿತ್ತು. ಕಂಗಳ ಮುಂದಣ ಕತ್ತಲೆ ಹರಿದುಹೋಯಿತ್ತು, ನಿಮ್ಮ ಸಂಗಸುಖದೊಳಗಿಪ್ಪ ಲಿಂಗೈಕ್ಯಂಗೆ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.