Index   ವಚನ - 173    Search  
 
ಮನವನರಿದಂಗೆ ಮತದ ಹಂಗೇಕೊ? ನಿತ್ಯವನರಿದಂಗೆ ತೀರ್ಥದ ಹಂಗೇಕೊ? ಪರಮಾರ್ಥವನರಿದಂಗೆ ಪ್ರಸಾದದ ಹಂಗೇಕೊ? ಜ್ಯೋತಿಯನರಿದಂಗೆ ಕತ್ತಲೆಯ ಹಂಗೇಕೊ? ಲೋಕವನರಿದಂಗೆ ವ್ಯಾಕುಲದ ಹಂಗೇಕೊ? ಈ ತೆರನನರಿದಂಗೆ ಮುಂದಾವ ಭೀತಿಯುಂಟು ಹೇಳಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ?