Index   ವಚನ - 179    Search  
 
ಮಹಾಘನ ನೆಲೆಗೊಂಡಿಪ್ಪ ಶರಣನ ನೆಲೆ ಎಂತಿಪ್ಪುದೆಂದರೆ, ನೆಲದ ಮರೆಯ ನಿಧಾನದಂತೆ, ತಿಲದ ಮರೆಯ ತೈಲದಂತೆ, ಮುಗಿಲ ಮರೆಯ ಮಿಂಚಿನಂತೆ, ನೀರೊಳಗಣ ಕಿಚ್ಚಿನಂತೆ, ಕಾಷ್ಠದೊಳಗಣ ಅಗ್ನಿಯಂತೆ, ತೃಣದೊಳಗಡಗಿದ ಚೈತನ್ಯದಂತೆ, ಈ ವಿಶ್ವದೊಳು ಇದ್ದೂ ಇಲ್ಲದಂತಿಪ್ಪ ಮಹಾಘನವ ನಿಮ್ಮ ಶರಣರು ಬಲ್ಲರಲ್ಲದೆ, ಮರ್ತ್ಯದ ಮರಣಬಾಧೆಗೊಳಗಾದ ಮನುಜರೆತ್ತಬಲ್ಲರು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?