Index   ವಚನ - 197    Search  
 
ವೇದಪುರಾಣಾಗಮಶಾಸ್ತ್ರ ನಾದದ ಸೊಮ್ಮೆಂಬಿರಿ. ಆ ನಾದದಿಂದ ಆಕಾಶ ಪುಟ್ಟಿತ್ತು . ಆಕಾಶದಿಂದ ವಾಯು ಪುಟ್ಟಿತ್ತು , ವಾಯುವಿನಿಂದ ಅಗ್ನಿ ಪುಟ್ಟಿತ್ತು . ಅಗ್ನಿಯಿಂದ ಅಪ್ಪು ಪುಟ್ಟಿತ್ತು , ಅಪ್ಪುವಿನಿಂದ ಪೃಥ್ವಿ ಪುಟ್ಟಿತ್ತು. ಪೃಥ್ವಿಯಿಂದ ಇರುವೆ ಕಡೆಯಾಗಿ ಎಂಬತ್ತುನಾಲ್ಕುಲಕ್ಷ ಜೀವಂಗಳು ಪುಟ್ಟಿದವು. ಅದೇನು ಕಾರಣವೆಂದಡೆ, ರಸಗಂಧದಿಂದ ರೂಪಾದವು, ಅಗ್ನಿಕಳೆಯಾಯಿತ್ತು . ವಾಯು ಚೈತನ್ಯವಾಯಿತ್ತು. ಆಕಾಶ ನಾದವಾಯಿತ್ತು. ಇಂತಿದರೊಳಗೆ ನಮ್ಮ ದೇವ ಇವರೊಂದರಂತೆಯೂ ಅಲ್ಲ . ಪಂಚತತ್ವವನಿಳುಹಿ, ಆತ್ಮತತ್ವ ಅನಾತ್ಮನೊಳು ಕೂಡಿ, ಅನಾಮಯಲಿಂಗ ಕಾಣಬಹುದು. ಅನಾಮಯಲಿಂಗವ ಕಂಡ ಬಳಿಕ, ಅದೇ ಲಿಂಗೈಕ್ಯವು. ಇದು ತಪ್ಪದು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ .