Index   ವಚನ - 202    Search  
 
ಶರಣರಿಗೆ ಭವವುಂಟೆಂದು ಮರ್ತ್ಯದಲ್ಲಿ ಹುಟ್ಟಿದ ಭವಭಾರಿಗಳು ನುಡಿದಾಡುವರು. ತಮ್ಮ ಹುಟ್ಟ ತಾವರಿಯರು, ತಾವು ಮುಂದೆ ಹೊಂದುವದನರಿಯರು. ಇವರು ಬಂದ ಬಂದ ಭವಕ್ಕೆ ಕಡೆಮೊದಲಿಲ್ಲ . ಇಂತಪ್ಪ ಸಂದೇಹಿಗಳು ನಮ್ಮ ಶರಣರ ಹುಟ್ಟ ಬಲ್ಲೆನೆನಬಹುದೆ ? ತನ್ನ ನರಿದವನಲ್ಲದೆ ಇದಿರನರಿಯರು. ಈ ಉದರಪೋಷಕರೆಲ್ಲರೂ ಇದ ಬಲ್ಲೆನೆಂಬುದು ಹುಸಿ. ಇದ ಬಲ್ಲವರು ಬಲ್ಲರಲ್ಲದೆ, ಸೊಲ್ಲಿಗಭೇದ್ಯನ ನಾನೆತ್ತ ಬಲ್ಲೆ ? ಎನ್ನ ಗುರು ಚೆನ್ನಮಲ್ಲೇಶ್ವರನೇ ಬಲ್ಲ . ಇನ್ನು ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣನೆ ಬಲ್ಲ .