ಹೆಸರಿಗೆ ಬಾರದ ಘನವ ಹೆಸರಿಗೆ ತಂದು,
ನುಡಿದಾಡುವ ಕಿಸುವಾಯರ ಮಾತ ಕೇಳಲಾಗದು.
ಅದೇನು ಕಾರಣವೆಂದರೆ, ಈ ಪಶುಗಳೇನು ಬಲ್ಲರು?
ಬಸವನೆಂತಿಪ್ಪನೆಂಬುದ ವಸುಧೆಯ ಮನುಜರೆತ್ತಬಲ್ಲರು?
ಇದು ಹುಸಿ ಹುಸಿ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ.
ಆ ಬಸವನ ನೆಲೆಯ ಬಸವಾದಿ ಪ್ರಮಥರೆ ಬಲ್ಲರಲ್ಲದೆ,
ಈ ಹುಸಿಮಾಯೆಗೊಳಗಾದ ಸೂತಕರೆತ್ತಬಲ್ಲರು
ನಿಮ್ಮ ಶರಣರ ಸುದ್ದಿಯ,
ಬಸವಪ್ರಿಯ ಕೂಡಲಚೆನ್ನಬಸವಣ್ಣಾ?