ವಚನ - 23     
 
ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ, ಎಲುವಿನ ತಡಿಕೆ, ಕೀವಿನ ಹಡಿಕೆ ಸುಡಲೀ ದೇಹವ; ಒಡಲುವಿಡಿದು ಕೆಡದಿರು, ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ.