Index   ವಚನ - 38    Search  
 
ಕರ್ಪುರದ ಕಳ್ಳನ ಹುಲ್ಲಿನಲ್ಲಿ ಕಟ್ಟಿಸಲು, ಅಗ್ನಿಯೆಂಬ ಹಿತವ ಬಂದು ಬಿಡಿಸಲಾಗಿ, ಪಾಶ ಬೆಂದು ಕಳ್ಳ ತನ್ನಲ್ಲಿಯೆ ಅಡಗಿದಂತೆ, ಶರಣಂಗೆ ಬಯಲಪಾಶ ಬಂದು ಕಟ್ಟಿರಲು, ಬಯಲಲಿಂಗ ಬಂದು ಬಿಡಿಸಲು, ಬಯಲು ಬಯಲು ಏಕವಾಯಿತ್ತು. ಮಹಾಲಿಂಗ ಕಲ್ಲೇಶ್ವರನೆಂಬ ಸಂಪತ್ತು ಸದಾಶೂನ್ಯವಾಯಿತ್ತು.