ಕುಲಹೀನಶಿಷ್ಯಂಗೆ ಅನುಗ್ರಹವ ಕೊಟ್ಟು,
ತನ್ನ ಪ್ರಾಣಲಿಂಗವ ನಿಕ್ಷೇಪಿಸಿ, ಕರ್ಣಮಂತ್ರವ ಹೇಳಿ,
ಆ ಶ್ರೀಗುರು ಬಂದು, ಆ ಶಿಷ್ಯನ ಮನೆಯ ಹೊಗಲೊಲ್ಲದೆ,
ಅಕ್ಕಿ ತುಪ್ಪವನೀಸಿಕೊಂಡುಂಬವನ ಕೇಡಿಂಗಿನ್ನೇವೆನಯ್ಯಾ?
ತನ್ನ ಪ್ರಾಣಲಿಂಗವನವರಿಗೆ ಕೊಟ್ಟು,
ತಾ ಹೋಗೆನೆಂಬ ವ್ರತಗೇಡಿಗಿನ್ನೇವೆನಯ್ಯಾ?
ಅವನ ಧನಕ್ಕೆ ತಂದೆಯಾದನಲ್ಲದೆ, ಅವನ ಕುಲಕ್ಕೆ ತಂದೆಯಲ್ಲ.
ಇದು ಕಾರಣ, ಮಹಾಲಿಂಗ ಕಲ್ಲೇಶ್ವರಾ,
ಲಿಂಗವ ಮಾರಿಕೊಂಡುಂಬ ಭಂಗಗಾರರು
ಕೆಟ್ಟ ಕೇಡನೇನೆಂಬೆನಯ್ಯಾ.