Index   ವಚನ - 51    Search  
 
ಘನದ ವೇದಿಸಿದ ಮನ, ಮನವ ವೇದಿಸಿದ ಇಂದ್ರಿಯಂಗಳು, ಇಂದ್ರಿಯಂಗಳ ವೇದಿಸಿದ ತನು, ತನುವ ವೇದಿಸಿದ ಪ್ರಸಾದ, ಪ್ರಸಾದವ ವೇದಿಸಿದ ಪರಿಣಾಮ, ಪರಿಣಾಮವ ವೇದಿಸಿದ ತೃಪ್ತಿ, ತೃಪ್ತಿಯ ವೇದಿಸಿದ ಇಷ್ಟಲಿಂಗ, ಇಷ್ಟಲಿಂಗವ ವೇದಿಸಿದ ಜ್ಞಾನ, ಜ್ಞಾನವ ವೇದಿಸಿದ ನಿರ್ಮಲ ಶಿವಕ್ರಿಯೆ, ನಿರ್ಮಲ ಶಿವಕ್ರಿಯೆ[ಯ] ವೇದಿಸಿದ ಶರಣಂಗೆ ಇನ್ನು ವೇದ್ಯರುಂಟೆ, ಮಹಾಲಿಂಗ ಕಲ್ಲೇಶ್ವರಾ?