Index   ವಚನ - 79    Search  
 
ಮನಕೆ ತೋರದು ನೆನೆವಡನುವಲ್ಲ, ಘನಕ್ಕೆ ಘನವನೇನ ಹೇಳುವೆ? ಆರರಿಂದ ಮೀರಿದುದ, ಬೇರೆ ತೋರಲಿಲ್ಲದುದ, ದೇವ ದಾನವ ಮಾನವರ ಬಲ್ಲತನದ ಬಗೆಯ ಮೀರಿದುದನೇನ ಹೇಳುವೆ? ಆದಿ ಮಧ್ಯಾಂತ ಶೂನ್ಯಂ ಚ ವ್ಯೋಮಾವ್ಯೋಮ ವಿವರ್ಜಿತಂ | ಧ್ಯಾನಜ್ಞಾನ ದಯಾದೂಧ್ರ್ವಂ ಶೂನ್ಯಲಿಂಗಮಿತಿ ಸ್ಮೃತಂ || ಇಂತೆಂದುದಾಗಿ, ಅರಿಯಬಾರದು, ಕುರುಹ ತೋರದು, ತೆರಹಿಲ್ಲದ ಘನಮಹಾಲಿಂಗ ಕಲ್ಲೇಶ್ವರನ ನಿಜ.