Index   ವಚನ - 91    Search  
 
ವೇದವನೋದಿದಡೇನು? ಶಾಸ್ತ್ರಪುರಾಣಾಗಮಂಗಳ ಕೇಳಿದಡೇನು? ಗುರುಕಾರುಣ್ಯವಿಲ್ಲದವನು ಲಿಂಗವ ಮುಟ್ಟಿ ಪೂಜಿಸಲಾಗದು. ಜಪತಪಧ್ಯಾನ ವಿಭೂತಿ ರುದ್ರಾಕ್ಷಿಯ ಧರಿಸಿದಡೇನು? ಅವನು ಪಂಚಮಹಾಪಾತಕನು, ಅವನ ಮುಖವ ನೋಡಲಾಗದು. ಇದನರಿದು ಗುರುಕರುಣವಿಡಿದು ಮಾಡುವ ಪೂಜೆಯೇ ಶಿವಂಗೆ ಪ್ರೀತಿ. ಇದನರಿಯದೆ ಗುರುಕರುಣವಿಲ್ಲದವ ಶಿವಲಿಂಗಪೂಜೆಯ ಮಾಡಿದನಾದಡೆ, ಅಘೋರನರಕ ತಪ್ಪದು, ಮಹಾಲಿಂಗ ಕಲ್ಲೇಶ್ವರಾ.