Index   ವಚನ - 94    Search  
 
ಶಿಲಾಮೂರ್ತಿ ಸ್ಥಾವರ ಶಿವಕುಲ ದೈವಕೆಲ್ಲಕೂ ಒಲವರದಿಂದ ಹೋಹಲ್ಲಿ, ಆ ದೈವದ ಬಲುಮೆಯ ಅವನ ಕುಲವಾಸಾ ಬಲುಮೆಯ ತೆರನೊ! ಈ ಹೊಲಬ ತಿಳಿದು, ಗುರು ಚರವಪ್ಪ ವಸ್ತುಸಂಸಾರದ ಒಡಲೆಳೆಗಾಗಿ, ಭಕ್ತನ ನೆಲೆಹೊಲವಾಸಕ್ಕೆ ಹಲುಬಿ ಬರಬಹುದೆ? ಇದು ವಸ್ತುವಿನ ನೆಲೆಯಿಲ್ಲ. ಕರ್ತೃ ಸಂಬಂಧಕ್ಕೆ ಸಲ್ಲ, ಮಹಾಮಹಿಮ ಕಲ್ಲೇಶ್ವರಲಿಂಗ ಅವರುವನೊಲ್ಲ.