Index   ವಚನ - 5    Search  
 
ನಾ ಮಾರಬಂದ ಸುಧೆಯ ಕೊಂಬವರಾರೂ ಇಲ್ಲ. ಹೊರಗಣ ಭಾಜನಕ್ಕೆ, ಒಳಗಣ ಇಂದ್ರಿಯಕ್ಕೆ ಉಂಡು ದಣಿದು, ಕಂಡು ದಣಿದು, ಸಂದೇಹವ ಬಿಟ್ಟು ದಣಿದು, ಕಂಡುದ ಕಾಣದೆ, ಸಂದೇಹದಲ್ಲಿ ಮರೆಯದೆ, ಆನಂದವೆಂಬುದ ಅಲಿಂಗನವ ಮಾಡಿ, ಆ ಕಂಗಳಂ ಮುಚ್ಚಿ, ಮತ್ತಮಾ ಕಂಗಳಂ ತೆರೆದು ನೋಡಲಾಗಿ, ಧರ್ಮೇಶ್ವರಲಿಂಗವು ಕಾಣಬಂದಿತ್ತು.