Index   ವಚನ - 8    Search  
 
ಬಲ್ಲೆನೆಂಬ ಮದದಲ್ಲಿ ಅರಿದೆನೆಂಬ ಮಹಾಮದವಂ ಕೊಂಡು, ಅಹಂಕಾರವೆಂಬ ಮದ, ಸರ್ವಾಂಗ ವೇಧಿಸಿ ತಲೆಗೇರಿದಲ್ಲಿ, ಸತ್ತೆಂಬುದನರಿಯದೆ, ಚಿತ್ತೆಂಬುದ ತಿಳಿಯದೆ, ಆನಂದವೆಂಬ ಆಶ್ರಯವ ಭಾವಿಸಿ ನೋಡದೆ, ಸ್ಥೂಲಸೂಕ್ಷ್ಮಕಾರಣವೆಂಬ ತನುತ್ರಯದ ಭೇದವ ಕಾಣಲರಿಯದೆ, ಅಂಡಪಿಂಡವೆಂಬ ಖಂಡಿತವ ತಿಳಿಯಲರಿಯದೆ, ದಿಂಡೆಯತನದಿಂದ ಕಂಡೆನೆಂದಡೆ, ಅದು ತಾ ಕೊಂಡ ಮೂರು ಹೆಂಡದ ಗುಣವೆಂದೆ, ಧರ್ಮೇಶ್ವರಲಿಂಗದ ಸಂಗವಲ್ಲಾಯೆಂದೆ.