Index   ವಚನ - 9    Search  
 
ಮಣ್ಣು ಹೊನ್ನು ಹೆಣ್ಣೆಂಬ ತ್ರಿಭಂಗಿಯಲ್ಲಿ ಭಂಗಿತರಾಗಿ, ಆಸೆಯೆಂಬ ಮಧುಪಾನದಿಂದ ಉಕ್ಕಲಿತವಿಲ್ಲದೆ, ವಸ್ತುವ ಮುಟ್ಟುವದಕ್ಕೆ ದೃಷ್ಟವಿಲ್ಲದೆ, ಕಷ್ಟದ ಮರವೆಯಲ್ಲಿ, ದೃಷ್ಟದ ಸರಾಪಾನವ ಕೊಂಡು ಮತ್ತರಾಗುತ್ತ, ಇಷ್ಟದ ದೃಷ್ಟದ ಚಿತ್ತ ಮತ್ತುಂಟೆ? ಧರ್ಮೇಶ್ವರಲಿಂಗವ ಮುಟ್ಟದೆ ಇತ್ತಲೆ ಉಳಿಯಿತ್ತು.