Index   ವಚನ - 12    Search  
 
ಶಾಸ್ತ್ರಮದ, ಸಂಪದಮದ, ಉಭಯಕೂಡಿಕೊಂಡಾತ್ಮಮದ, ಅರಿದು ಎಲ್ಲರಿಗೆ ಹೇಳಿದೆನೆಂಬ ಗೆಲ್ಲ ಸೋಲದ ಮದ. ಇಂತೀ ಎಲ್ಲಾ ಮದವ ಸೇವಿಸುತ್ತ, ಅರಿಯದ ಮದವನೊಂದು ನುಡಿದಡೆ, ಬಿರುನುಡಿಯೆಂದೆಂಬರು. ಅರಿಯದವ ಇಂತಿವ ಅರಿಯದಂತೆ ಸಂಚದಲ್ಲಿ ಸಂಚದಂತಿರಬೇಕು. ಧರ್ಮೇಶ್ವರಲಿಂಗ ಹೀಂಗಲ್ಲದೆ ಅರಿಯಬಾರದು.