Index   ವಚನ - 2    Search  
 
ಕಾಷ್ಟವಗ್ನಿಯೊಳಗಿಡಲಿಕ್ಕಾಗಿ, ಆ ಕಾಷ್ಟದೊಳಗಿದ್ದಗ್ನಿ ನಾನಿದ್ದೇನೆ, ನೀ ಬೇಡಾ ಎಂದಿತ್ತೆ? ತಾನಡಗಿ ಇದಿರಿಟ್ಟ ಅಗ್ನಿಗೆ ಒಡಲಾಯಿತ್ತು. ಇಂತು ಇದ್ದ ಇದಿರಿಂಗೆ ಒಡಲೆಡೆಗೊಡದ ಅಗಮ್ಯಂಗೆ ಪಡಿಪುಚ್ಚವಿಲ್ಲ, ಕುಂಭೇಶ್ವರಲಿಂಗದಲ್ಲಿದ್ದ ಜಗನ್ನಾಥನನರಿದವಂಗೆ.