Index   ವಚನ - 4    Search  
 
ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ.