Index   ವಚನ - 7    Search  
 
ಭಯಭಕ್ತಿಯಿಂದ ಸಂಗನಬಸವಣ್ಣನ ಶ್ರೀಪಾದವ ಕಂಡೆನು. ಅನುಮಿಷ ದೃಷ್ಟಿಯಿಂದ ಚೆನ್ನಬಸವಣ್ಣನ ಶ್ರೀಪಾದವ ಕಂಡೆನು. ಸುಜ್ಞಾನದ ಬೆಳಗಿನಿಂದ ಪ್ರಭುದೇವರ ಶ್ರೀಪಾದವ ಕಂಡೆನು. ಇಂತೀ ಮೂವರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು, ಕುಂಭೇಶ್ವರಲಿಂಗದಲ್ಲಿ ಜಗನ್ನಾಥ ಸಾಕ್ಷಿಯಾಗಿ.