Index   ವಚನ - 9    Search  
 
ಲಿಂಗವಂತರು, ಲಿಂಗಾಚಾರಿಗಳಂಗಣಕ್ಕೆ. ಲಿಂಗಾರ್ಪಿತ ಭಿಕ್ಷಕ್ಕೆ ಹೋದಲ್ಲಿ, ಲಿಂಗಾರ್ಪಿತವ ಮಾಡುವಲ್ಲಿ, ಸಂದೇಹವಿಲ್ಲದೆ ಕಾಣದುದನೆಚ್ಚರಿಸದೆ, ಕಂಡುದ ನುಡಿಯದೆ, ಕಂಡುದನು ಕಾಣದುದನು, ಒಂದೆಸಮವೆಂದುತಿಳಿಯಬಲ್ಲಡೆ, ಕುಂಭೇಶ್ವರಲಿಂಗವೆಂಬೆನು.