Index   ವಚನ - 10    Search  
 
ಒಂದು ಲಿಂಗದಿಂದ ಉದ್ಭವಿಸಿತ್ತು, ನಾದ ಬಿಂದು ಕಳೆ. ಆ ನಾದ ಬಿಂದು ಕಳೆಗೆ ಉದ್ಭವಿಸಿತ್ತು, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವನು. ಈ ಪಂಚಬ್ರಹ್ಮದ ಬೆಳೆಯ [ಉತ್ಪತ್ಯವ] ಪೇಳುತಿದ್ದನು ಕಾಣಾ, ಜಂಗಮಲಿಂಗಪ್ರಭುವೆ.