Index   ವಚನ - 37    Search  
 
ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲ ಭ್ರಮೆ ಛಲ ಭ್ರಮೆ ಜಾತಿ ಭ್ರಮೆ, ನಾಮ ವರ್ಣ ಆಶ್ರಮ ಮತ ಶಾಸ್ತ್ರ ಭ್ರಮೆ, ತರ್ಕಭ್ರಮೆ ರಾಜ್ಯಭ್ರಮೆ, ಧನಧಾನ್ಯ ಪುತ್ರ ಮಿತ್ರ ಭ್ರಮೆ, ಐಶ್ವರ್ಯ ತ್ಯಾಗ ಭೋಗ ಯೋಗಭ್ರಮೆ, ಕಾಯ ಕರಣ ವಿಷಯ ಭ್ರಮೆ, ವಾಯು ಮನ ಭಾವ ಜೀವ ಮೋಹಭ್ರಮೆ, ನಾಹಂ ಕೋಹಂ ಸೋಹಂ, ಮಾಯಾ ಭ್ರಮೆ ಮೊದಲಾದ ಬತ್ತೀಸ ಪಾಶಭ್ರಮಿತರಾಗಿ ತೊಳಲುವ ವೇಷಧಾರಿಗಳ ಕಂಡು ಶಿವಶಕ್ತಿ ಶಿವಭಕ್ತ ಶಿವಪ್ರಸಾದಿ ಶಿವಶರಣ ಶಿವೈಕ್ಯ ಶಿವಜಂಗಮವೆಂದು ನುಡಿಯಲಾರದೆ ಎನ್ನ ಮನ ನಾಚಿ ನಿಮ್ಮಡಿಗಭಿಮುಖವಾಯಿತ್ತಯ್ಯಾ ಚೆನ್ನಮಲ್ಲಿಕಾರ್ಜುನಾ.