ವಚನ - 32     
 
ಅಜನ ಕಲ್ಪಿತವಲ್ಲದ ಭಕ್ತಿ ವಿಷ್ಣುವಿನ ಕಲ್ಪಿತವಲ್ಲದ ಭಕ್ತಿ ರುದ್ರನ ಕಲ್ಪಿತವಲ್ಲದ ಭಕ್ತಿ ನಿನ್ನ ಕಲ್ಪಿತವಾಯಿತ್ತಯ್ಯಾ ಬಸವಾ. ನೋಟಕಾರರ ನೋಟಕ್ಕೆ ಸಿಕ್ಕದ ಭಕ್ತಿ ಕೂಟಕ್ಕೆ ಕೂಟವಾಯಿತ್ತಯ್ಯಾ ಬಸವಾ ಈ ಬೇಟದ ಭಕ್ತಿಯ ನಿಮ್ಮಿಂದ ಕಂಡೆನಯ್ಯಾ, ಬಸವ ಗುರುವೆ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.