ವಚನ - 81     
 
ಅಯ್ಯಾ, ನಿಮ್ಮ ಕಂಡು ಕಂಗಳು ನೋಡಲಮ್ಮದೆ ಬೆಚ್ಚಿ ಬೆದರಿದುವಯ್ಯಾ; ನೀನು ಶತಕೋಟಿ ಸೂರ್ಯಪ್ರಕಾಶಕ್ಕತೀತನು! ನಿನ್ನ ಕಂಡ ಬಳಿಕ ಕರ್ಮವುಂಟೆ? ಕಪಿಲಸಿದ್ಧಮಲ್ಲಿಕಾರ್ಜುನಾ.