ವಚನ - 50     
 
ಅಶನದಿಂದ ಕುದಿದು, ವ್ಯಸನದಿಂದ ಬೆಂದು, ಅತಿ ಆಸೆಯಿಂದ ಬಳಲಿ, ವಿಷಯಕ್ಕೆ ಹರಿವ ಜೀವಿಗಳು ನಿಮ್ಮನರಿಯರು. ಕಾಲಕಲ್ಪಿತ ಪ್ರಳಯ ಜೀವಿಗಳೆಲ್ಲ ನಿಮ್ಮನೆತ್ತ ಬಲ್ಲರಯ್ಯ ಚೆನ್ನಮಲ್ಲಿಕಾರ್ಜುನಾ?