Index   ವಚನ - 55    Search  
 
ಆತುರದ ಧ್ಯಾನದಿಂದ ಧಾವತಿಗೊಂಡೆ; ಜ್ಯೋತಿರ್ಲಿಂಗವ ಕಾಣಿಸಬಾರದು. ಮಾತಿನ ಮಾಲೆಗೆ ಸಿಲುಕುವನಲ್ಲ; ಧಾತುಗೆಡಿಸಿ ಮನವ ನೋಡಿ ಕಾಡುವನು. ಆತುಮನಂತರ ಪರವನರಿದಡೆ ಆತನೆ ಯೋಗಿ; ಆತನ ಪಾದಕ್ಕೆ ಶರಣೆಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.