ವಚನ - 184     
 
ಆನೆತ್ತಲಯ್ಯಾ, ಕ್ರಿಮಿಕೀಟಕನಾಗಿ ಹುಟ್ಟುವನ ಹುಟ್ಟ ಕೆಡಿಸಿದೆ. ಇನ್ನಹುದಾನೇನರಿದು ಹೇಳಾ, ಎಲೆ ಅಯ್ಯಾ. ಶುದ್ಧಸಿದ್ಧಪ್ರಸಿದ್ಧವನು ತೋರಿ ಪ್ರಾಪ್ತಭೋಕ್ತಭುಕ್ತಿಯೆಂಬುದಕ್ಕೆ ಹೊರಗು ಮಾಡಿದೆ. ಇನ್ನು ನಾನೀನಪ್ಪುದೇನರಿದೈ, ಕಪಿಲಸಿದ್ಧಮಲ್ಲಿಕಾರ್ಜುನಾ.