Index   ವಚನ - 61    Search  
 
ಆಯತ ಸ್ವಾಯತ ಅನುಭಾವವ ನಾನೆತ್ತ ಬಲ್ಲೆನಯ್ಯಾ? ಗುರು ಲಿಂಗ ಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಅಹಂಕಾರವಳಿದಿಹಂತಹ ಪುರಾತನರ ಮನೆಯಲ್ಲಿ ಭೃತ್ಯರ ಭೃತ್ಯಳಾಗಿಪ್ಪೆನಯ್ಯಾ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಗಣಂಗಳಲ್ಲದನ್ಯವ ನಾನರಿಯೆನಯ್ಯಾ.