ವಚನ - 263     
 
ಈ ರಿತುಕಾಲ ಹುಟ್ಟಿ ಮುಟ್ಟಿ ಕೆಡುವಡೆ ಒಳಗೆ ಬೆಳೆಯಲೇಕಯ್ಯಾ! ಹೋ! ವಾ! ಹೋ! ಅಯ್ಯಾ! ನೀ ಮುಟ್ಟಿ ಕೆಡುವಡೆ ಒಳಗೆ ಬೆಳೆಯಲೇಕಯ್ಯಾ. ಈ ಬಟ್ಟೆ ಹುಸಿಬಟ್ಟೆ. ಕಪಿಲಸಿದ್ಧಮಲ್ಲಿನಾಥಯ್ಯನ ಅಂಜದೆ ನೆನೆಯಿರೊ, ನೆನೆಯಿರೊ! ಹೋ! ವಾ! ಹೋ! ಅಯ್ಯಾ!