ವಚನ - 416     
 
ಕರ್ಮಿಗಳು ಶಿವಪಥಕ್ಕೆ ಬಪ್ಪಾಗಳವರ ಕರ್ಮ ಬೆಂಬತ್ತಿ ಕಾಡುವದಯ್ಯಾ. ಲಿಂಗಾರಾಧನೆಯ ಮಾಡಲೀಯದು. ಸಂದೇಹವನೆ ತೋರಿಸಿ ಕೆಡಿಸುವದಯ್ಯಾ. ಏಕೆ? ಅವರು ಮಾಡಿದ ಕರ್ಮವನುಣಬೇಕಾಗಿ! ಇದನರಿದು ನಿಮ್ಮ ನೆರೆನಂಬಿ ಪೂಜಿಸೆ ಹರಿವುದು ಕರ್ಮ, ಕಪಿಲಸಿದ್ಧಮಲ್ಲಿಕಾರ್ಜುನಾ, ದೇವರ ದೇವಾ.