Index   ವಚನ - 81    Search  
 
ಉರಕ್ಕೆ ಜವ್ವನಗಳು ಬಾರದ ಮುನ್ನ, ಮನಕ್ಕೆ ನಾಚಿಕೆಗಳು ತೋರದ ಮುನ್ನ, ನಮ್ಮವರಂದೆ ಮದುವೆಯ ಮಾಡಿದರು ಸಿರಿಶೈಲ ಚೆನ್ನಮಲ್ಲಿಕಾರ್ಜುನಂಗೆ. ಹೆಂಗೂಸೆಂಬ ಭಾವ ತೋರದ ಮುನ್ನ ನಮ್ಮವರಂದೆ ಮದುವೆಯ ಮಾಡಿದರು.