ವಚನ - 95     
 
ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ? ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ. ಅಯ್ಯಾ ಎನ್ನೊಳಗೆ ಇನಿತಿರ್ದು ಮೈದೋರದ ಭೇದವ ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ.