Index   ವಚನ - 109    Search  
 
ಎಲೆ ಕಾಲಂಗೆ ಸೆರೆಯಾದ ಕರ್ಮಿ, ಎಲೆ ಕಾಮಂಗೆ ಗುರಿಯಾದ ಮರುಳೆ, ಬಿಡು ಬಿಡು ಕೈಯ ನರಕವೆಂದರಿಯದೆ ತಡೆವರೆ ಮನುಜಾ? ಚೆನ್ನಮಲ್ಲಿಕಾರ್ಜುನನ ಪೂಜೆಯ ವೇಳೆ ತಪ್ಪಿದರೆ ನಾಯಕ ನರಕ ಕಾಣಾ ನಿನಗೆ.