Index   ವಚನ - 116    Search  
 
ಎಳೆವರಯದಲ್ಲಿ ಮೋಹ ಮೊಳೆ ಹುಟ್ಟಿತ್ತು, ಗುರುಹಸ್ತದಲ್ಲಿ ಅಂಕುರವಾಯಿತ್ತು, ಏಳೆಲೆ ಹೋಯಿತ್ತು ಬಳಗದ ನಡುವೆ. ಕೇಳೆಲೆಯವ್ವಾ, ನೀನು ಕೇಳು ತಾಯೆ. ಒಂಬತ್ತೆಲೆ ಎಂದಿಂಗೆ ಪರಿಪೂರ್ಣವಾಯಿತ್ತು ನೋಡವ್ವಾ. ಚೆನ್ನಮಲ್ಲಿಕಾರ್ಜುನನೆ ಗಂಡನೆನಗೆ ಲೋಕದವರ ಸಂಬಂಧವಿಲ್ಲೆಂದು ಬಿಟ್ಟು ತೊಲಗಿದೆನು ಕಾಣಾ ಎಲೆಯವ್ವಾ.