Index   ವಚನ - 121    Search  
 
ಒಡಲಿಲ್ಲದ ನುಡಿಯಿಲ್ಲದ ಕಡೆಯಿಲ್ಲದ ನಲ್ಲನ ಒಡಗೂಡಿ ಸುಖಿಯಾದೆ ಕೇಳಿರಯ್ಯಾ. ಭಾಷೆ ಪೈಸರವಿಲ್ಲ, ಓಸರಿಸೆನನ್ಯಕ್ಕೆ, ಆಸೆ ಮಾಡೆನು ಮತ್ತೆ ಭಿನ್ನ ಸುಖಕ್ಕೆ. ಆರಳಿದು ಮೂರಾಗಿ, ಮೂರಳಿದು ಎರಡಾಗಿ, ಎರಡಳಿದು ಒಂದಾಗಿ ನಿಂದೆನಯ್ಯಾ. ಬಸವಣ್ಣ ಮೊದಲಾದ ಶರಣರಿಗೆ ಶರಣಾರ್ಥಿ: ಆ ಪ್ರಭುವಿನಿಂದ ಕೃತಕೃತ್ಯಳಾದೆನು ನಾನು. ಮರೆಯಲಾಗದು, ನಿಮ್ಮ ಶಿಶುವೆಂದು ಎನ್ನನು, ಚೆನ್ನಮಲ್ಲಿಕಾರ್ಜುನನ ಬೆರೆಸೆಂದು ಹರಸುತ್ತಿಹುದು.