ವಚನ - 825     
 
ಭಕ್ತನ ಮನ ಹೆಣ್ಣಿನೊಳಗಾದಡೆ, ವಿವಾಹವಾಗಿ ಕೂಡುವುದು. ಭಕ್ತನ ಮನ ಮಣ್ಣಿನೊಳಗಾದಡೆ, ಕೊಂಡು ಆಲಯವ ಮಾಡುವುದು. ಭಕ್ತನ ಮನ ಹೊನ್ನಿನೊಳಗಾದಡೆ, ಬಳಲಿ ದೊರಕಿಸುವುದು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.