ವಚನ - 122     
 
ಒಪ್ಪುವ ವಿಭೂತಿಯ ನೊಸಲಲ್ಲಿ ಧರಿಸಿ, ದೃಷ್ಟಿವಾ[ರಿ] ನಿಮ್ಮ ನೋಡಲೊಡನೆ ಬೆಟ್ಟದಷ್ಟು ತಪ್ಪುಳ್ಳಡೆಯೂ ಮುಟ್ಟಲಮ್ಮವು ನೋಡಾ. ದುರಿತ ಅನ್ಯಾಯವ ಪರಿಹರಿಸಬಲ್ಲಡೆ 'ಓಂ ನಮಃ ಶಿವಾಯ' ಶರಣೆಂಬುದೆ ಮಂತ್ರ. ಅದೆಂತೆಂದಡೆ: ನಮಃ ಶಿವಾಯೇತಿ ಮಂತ್ರಂ ಯಃ ಕರೋತಿ ತ್ರಿಪುಂಡ್ರಕಂ! ಸಪ್ತಜನ್ಮಕೃತಂ ಪಾಪಂ ತತ್‍ಕ್ಷಣಾದೇವ ನಶ್ಯತಿ'!! ಇಂತೆಂದುದಾಗಿ, ಸಿಂಹದ ಮರಿಯ ಸೀಳ್ನಾಯಿ ತಿಂಬಡೆ ಭಂಗವಿನ್ನಾರದೊ ಚೆನ್ನಮಲ್ಲಿಕಾರ್ಜುನಾ?