ವಚನ - 875     
 
ಮಹಾಜ್ಯೋತಿಯನೊಡಗೂಡಿಪ್ಪ ಉರುತರ ಪರಮಜ್ಞಾನಿ ಘನತರದ ಸಂಯೋಗಿ ಬ್ರಹ್ಮಾಂಡಂಗಳು ನಿನ್ನ ಮರೆಸಲರಿಯವು. ಸಕಲ ಬ್ರಹ್ಮಾಂಡಂಗಳನೊಳಗು ಮಾಡಿ ಮೇಲೆ ತೊಳಗಿ ಬೆಳಗುತಿಪ್ಪೆ ಎಮ್ಮ ಶರಣರ ಕರಸ್ಥಲದಲ್ಲಿ ಸಿಕ್ಕಿ. ಮಹಾದೀಪ್ತಿಯನಿಂಬುಗೊಂಡಿತ್ತಾ ಕರಸ್ಥಲವು; ಆ ಕರಸ್ಥಲಕ್ಕೆ ಆವ ಬ್ರಹ್ಮಾಂಡಂಗಳ ಸರಿಯೆಂಬೆ? ನಿಮ್ಮ ಶರಣರ ಕರಸ್ಥಲವೆ ಪ್ರಮಾಣವಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.