ವಚನ - 892     
 
ಮುಂದಲೆವಿಡಿದು ಮೋಹಿಸುವ ಗಂಡನ ಕಾಣದೆ ಬಾಯ್ಬಿಡುತ್ತಿದೇನೆ ಗುರುವೆ. ಈ ಮಂದಮತಿಯ ಮುಂಡವ ಕೊಂಡೊಯ್ದು ಸಂದೇಹವಿಲ್ಲದೆ ಎನ್ನ ಗಂಡನ ಎನಗೆ ತೋರಿದಡೆ, ನೀನೆನ್ನ ತಂದೆ ಎಂಬೆನಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.