ವಚನ - 175     
 
ಶಬ್ದ ಸ್ಪರ್ಶ ರೂಪು ರಸ ಗಂಧ-ಪಂಚ ಇಂದ್ರಿಯ, ಸಪ್ತಧಾತು ಅಷ್ಟಮದದಿಂದ ಮುಂದುಗಾಣದವರು ನೀವು ಕೇಳಿರೆ; ಲಿಂಗದ ವಾರ್ತೆಯ ವಚನದಲ್ಲಿ ರಚನೆಯ ಮಾಡುವಿರಯ್ಯಾ, ಸಂಸಾರದ ಮಚ್ಚು ಬಿಡದನ್ನಕ್ಕ, ಸೂಕ್ಷ್ಮ ಶಿವಪಥವು ಸಾಧ್ಯವಾಗದು. ಗುಹೇಶ್ವರಲಿಂಗದಲ್ಲಿ ವಾಕು ಪಾಕವಾದಡೇನೊ, ಮನ ಪಾಕವಾಗದನ್ನಕ್ಕ?