Index   ವಚನ - 144    Search  
 
ಕಲ್ಲ ತಾಗಿದ ಮಿಟ್ಟೆ ಕೆಲಕ್ಕೆ ಸಾರುವಂತೆ ಆನು ಬಲ್ಲೆನೆಂಬ ನುಡಿ ಸಲ್ಲದು. ಲಿಂಗದಲ್ಲಿ ಮರೆದು ಮಚ್ಚಿರ್ದ ಮನವು ಹೊರಗೆ ಬೀಸರವೋಗದೆ? ಉರೆ ತಾಗಿದ ಕೋಲು ಗರಿ ತೋರುವುದೆ? ಮೊರೆದು ಬೀಸುವ ಗಾಳಿ ಪರಿಮಳವನುಂಡಂತೆ ಬೆರಸಬೇಕು ಚೆನ್ನಮಲ್ಲಿಕಾರ್ಜುನಯ್ಯನ.