ವಚನ - 1132     
 
ಹಿಂದು ಮುಂದು ಸಂದಳಿದ ಬಳಿಕ ಆನು ನೀನೆಂಬ ಭೇದವೇತಕಯ್ಯ? ಆನಂದ ಅಪರಸ್ಥಾನದಲ್ಲಿ ಶುದ್ಧ ಸಂಯೋಗವಾದ ಬಳಿಕ ದಳ ಪ್ರತಿಷ್ಠೆಯ ಮಾಡಿನೆಂದು ಏನೆಂಬೆನಯ್ಯ? ಪೂರ್ವದಳದಲ್ಲಿ ಲಕ್ಷವು ಇಪ್ಪತ್ನಾಲ್ಕುಸಾವಿರ ಎಸಳು, ಅಪರದಳದಲ್ಲಿ ಹದಿನಾಲ್ಕುಸಾವಿರ ಎಸಳು, ನಾನಾ ವರ್ಣ ಆನಂದನೆಂಬ ಅಧಿದೇವತೆ ಮಧ್ಯಮಸ್ಥಾನದಲ್ಲಿ, ಸಿದ್ಧ ಸಂಯೋಗವೆಂಬ ಸರೋವರದಲ್ಲಿ, ವೈನ್ಯೆಯೆಂಬ ಕೊಳಂಗಳು ಹದಿನಾರೆಸಳಿನ ಕಮಳ ಬೀಜಾಕ್ಷರಗಳೆಂಟು, ಅಧಿದೇವತೆ ಸಚ್ಚಿದಾನಂದನೆಂಬ ಗಣೇಶ್ವರ ಆನಂದ ಬ್ರಹ್ಮಲೋಕದಲ್ಲಿ ಗುರುವೆಂಬ ಸರೋವರದಲ್ಲಿ ನಿತ್ಯವೆಂಬ ಕೊಳ. ಶುದ್ಥಶ್ವೇತನೆಂಬ ಅಮೃತ ಪ್ರವಾಹ, ದಳವೊಂದು, ಮೂಲ ಮೂರು, ಫಲವಾರು ಕಪಿಲಸಿದ್ಧಮಲ್ಲಿಕಾರ್ಜುನನೆಂಬ ಅಧಿದೇವತೆ.