ವಚನ - 157     
 
ಕಾಯ ಕರ್ರನೆ ಕಂದಿದಡೇನಯ್ಯಾ? ಕಾಯ ಮಿರ್ರನೆ ಮಿಂಚಿದಡೇನಯ್ಯಾ? ಅಂತರಂಗ ಶುದ್ಧವಾದ ಬಳಿಕ ಚೆನ್ನಮಲ್ಲಿಕಾರ್ಜುನಯ್ಯಾ ನೀನೊಲಿದ ಕಾಯವು ಹೇಗಿದ್ದಡೇನಯ್ಯಾ?