Index   ವಚನ - 1293    Search  
 
ಆದಿಯಾಧಾರಕ್ಕೆ ಮೂಲ ತಾ ಬಸವಣ್ಣ. ಹೋದನೈ ಭಕ್ತಿಯೊಳಗೆ ಹೊಲಬುದಪ್ಪಿ. ಊರನರಿಯದ ಗ್ರಾಮ, ಹೊಲಬುದಪ್ಪಿದ ಸೀಮೆ; ಆತನಾನತದಿಂದಾನು ನೀನಾದೆನೈ. ಬಸವಣ್ಣ ಬಸವಣ್ಣ ಬಸವಣ್ಣ ಎಂಬ ನಾಮಾಕ್ಷರದೊಳಗೆ ದೆಸೆಗೆಟ್ಟೆನೈ ಗುರುವೆ, ಕಪಿಲಸಿದ್ಧಮಲ್ಲಿಕಾರ್ಜುನಾ.