ವಚನ - 1335     
 
ಯೋಗದ ಹೊಲಬ ನಾನೆತ್ತ ಬಲ್ಲೆನಯ್ಯಾ? ಯೋಗ ಶಿವಶಕ್ತಿ ಸಂಪುಟವಾಗಿಪ್ಪುದಲ್ಲದೆ, ಶಿವಶಕ್ತಿವಿಯೋಗವಪ್ಪ ಯೋಗವಿಲ್ಲವಯ್ಯಾ. ಹೃದಯಕಮಲದಲ್ಲಿಇಪ್ಪಾತ ನೀನೆಯಲ್ಲದೆ, ಎನಗೆ ಬೇರೆ ಸ್ವತಂತ್ರವಿಲ್ಲ ಕೇಳಾ, ಕಪಿಲಸಿದ್ಧಮಲ್ಲಿಕಾರ್ಜುನಾ.