ವಚನ - 1337     
 
ಒಪ್ಪುದನಲ್ಲದುದನೊಪ್ಪವ ಮಾಡುವಿರಯ್ಯಾ. ನಿಮ್ಮೊಲವು ಚೆಲುವು ಕಂಡಯ್ಯಾ. ನೀವೆಂತು ನೋಡಿದಡಂತಿಪ್ಪುದಲ್ಲದೆ, ಅಪ್ಪುದಲ್ಲವೆಂಬವರಿಲ್ಲ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.