ವಚನ - 1347     
 
ಕೃಷಿಯ ಮಾಡಿ ಉಣ್ಣದೆ ಹಸಿವು ಹರಿವ ಪರಿ ಇನ್ನೆಂತೊ? ಕರ್ಮಯೋಗವ ಮಾಡದೆ ನಿರ್ಮಲ ಸುಚಿತ್ತವನರಿವ ಪರಿ ಇನ್ನೆಂತೊ? ಬೇಯದ ಅಶನವನುಂಬ ಠಾವಾವುದು ಕಪಿಲಸಿದ್ಧಮಲ್ಲಿಕಾರ್ಜುನಲಿಂಗಕ್ಕೆ?