Index   ವಚನ - 1348    Search  
 
ಕೈಯಲ್ಲಿ ಹಿಡಿದು ಕಾಬುದು ಕರ್ಮಪೂಜೆಯಲ್ಲವೆ? ಮನದಲ್ಲಿ ನೆನೆದು ಮಾಡುವುದೆಲ್ಲವು ಕಾಯದ ಕರ್ಮವಲ್ಲವೆ? ಭಾವಶುದ್ಧವನರಿವ ಪರಿ ಇನ್ನಾವುದು? ಕಪಿಲಸಿದ್ಧಮಲ್ಲಿಕಾರ್ಜುನಾ.